ಕರುಣಾಳು ಬಾ ಬೆಳಕೆ...
ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯಾ ಗವಿ
ಮನೆದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು
ಹೇಳಿ ನನ್ನಡಿಯಿಡಿಸು
ಬಲುದೂರ ನೋಟವನು
ಹೇಳಲೊಡನೆಯೇ ಸಾಕು
ನನಗೊಂದು ಹೆಜ್ಜೆ
ಮುನ್ನ ಇಂತಿರದಾದೇ
ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು
ಇಷ್ಟು ದಿನ ಸಲಹಿರುವೆ
ಈ ಮೂರ್ಖನನು ನೀನು
ಮುಂದೆಯೂ ಕೈ ಹಿಡಿದು ನಡೆಸದಿಹೆಯಾ?
ಕಷ್ತದಡವಿಯ ಕಳೆದು
ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕಡಿಹೆಯಾ?
ಬೆಳಗಾಗ ಹೊಳೆಯದೇ
ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡ
ದಿವ್ಯ ಮುಖ ನಗುತ
ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
This song is a Kannada translation of 'Lead Kindly Light'.
Translated by B.M.Shrikanthaiah
No comments:
Post a Comment